

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಬಾಣಾವರ ಹೋಬಳಿಯ ಬೆಂಡೆಕೆರೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ವಸಂತಾ ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮೂರ್ತಿ ಭೋವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷೆ ಚಂದ್ರಮ್ಮ ಮತ್ತು ಉಪಾಧ್ಯಕ್ಷ ಚಂದ್ರೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವಸಂತಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೂರ್ತಿ ಭೋವಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ತಾಪಂ ಇಒ ಸತೀಶ್ ಅವಿರೋಧ ಆಯ್ಕೆ ಘೋಷಿಸಿದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಒಲಿದು ಬಂದಿರುವ ಜವಾಬ್ದಾರಿಯನ್ನ್ನು ಸಮರ್ಥಕವಾಗಿ ಬಳಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಡೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸಬೇಕು. ಕ್ಷೇತ್ರದ ಶಾಸಕನಾಗಿ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಅಧ್ಯಕ್ಷ ಚಂದ್ರಮ್ಮ ಅಜ್ಜಪ್ಪ, ಮಾಜಿ ಉಪಾಧ್ಯಕ್ಷ ಚಂದ್ರೇಗೌಡ, ಸದಸ್ಯರಾದ ಕುಬೇರಪ್ಪ, ಗಂಗಾಧರ್, ನಟರಾಜ್, ಸಿದ್ದನಾಯಕ, ಲಲಿತಮ್ಮ, ಜಗದೀಶ್, ಶಾರದಮ್ಮ ದೇವಯ್ಯ, ದಯಾನಂದ್, ಸಿದ್ದಮಲ್ಲಮ್ಮ, ಭಾವನಾ ಗುರುಮೂರ್ತಿ ಇದ್ದರು.