

ಬಂಟ್ವಾಳ: ವಟಪುರ ಕ್ಷೇತ್ರ ಖ್ಯಾತಿಯ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ರಥೋತ್ಸವ ಮಾರ್ಚ್ 2ರಿಂದ 7ರವರೆಗೆ ನಡೆಯಲಿದೆ. 2ರಿಂದ 7ವರೆಗೆ 201ನೇ ವರ್ಷದ ಬ್ರಹ್ಮರಥೋತ್ಸವ ನಡೆಯಲಿದ್ದು ಫೆ.28ರಂದು ದೇವರ ಬ್ರಹ್ಮರಥವನ್ನು ಹೊರಗೆ ತೆಗೆಯುವ ಕಾರ್ಯಕ್ರಮ ನಡೆಯಲಿದೆ.
1ರಂದು ದೇವರ ಮೃತ್ತಿಕಾರೋಹಣ, 2ರಂದು ಧ್ವಜಾರೋಹಣ, ಬೆಳ್ಳಿ ಪಾಲ್ಕಿ ಹಗಲೋತ್ಸವ, ಗರುಡೋತ್ಸವ, 3ರಂದು ಬೆಳ್ಳಿ ಪಾಲ್ಕಿ ಹಗಲೋತ್ಸವ, ಹನುಮಂತೋತ್ಸವ, 4ರಂದು ಬೆಳ್ಳಿ ಲಾಲ್ಕಿ ಹಗಲೋತ್ಸವ, ಚಂದ್ರಮಂಡಲ ಉತ್ಸವ, 5ರಂದು ದೇವರ ಮೂಲ ಪ್ರತಿಷ್ಠಾ ವರ್ಧಂತಿ, ಪಟ್ಟದ ದೇವರಿಗೆ ಸ್ವರ್ಣ ಪೀಠ ಸಮರ್ಪಣೆ, ಬೆಳ್ಳಿ ಪಾಲ್ಕಿ ಹಗಲೋತ್ಸವ, ಜಲಕ್ರೀಡೆ, ಗೋಪುರೋತ್ಸವ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ, 6ರಂದು ಬ್ರಹ್ಮ ರಥೋತ್ಸವ, 7ರಂದು ಅವಭೃತ ಉತ್ಸವ, ಧ್ವಜಾವರೋಹಣ ನಡೆಯಲಿದೆ
*ವಾಹನಗಳನ್ನು ಇಲ್ಲಿ ನಿಲ್ಲಿಸಬಹುದು: ಬ್ರಹ್ಮರಥೋತ್ಸವ ಪ್ರಯುಕ್ತ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾದ ಜಾಗಗಳಿವು.
ಮಂಗಳೂರು, ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಬರುವವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಬದಿಯ ಜಾಗದಲ್ಲಿ ಹಾಗೂ ದೇವಳದ ಸಮೀಪ ಇರುವ ಶಾಲಾ ರಸ್ತೆಯ ಮೂಲಕ ಎಸ್‌ವಿಎಸ್ ದೇವಳದ ವಿದ್ಯಾ ಸಂಸ್ಥೆಯ ವಠಾರದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ.
ಮೂಡುಬಿದರೆ, ಕಾರ್ಕಳ, ಕಡೆಯಿಂದ ಬರುವ ವಾಹನಗಳು ಬೈಪಾಸ್ ಜಂಕ್ಷನ್‌ನಿಂದ ಬಂಟ್ವಾಳ ಪೇಟೆ ರಸ್ತೆಯಲ್ಲಿ ದೇವರಕಟ್ಟೆಯ ಬಸ್ ನಿಲ್ದಾಣದಲ್ಲಿ ಹಾಗೂ ಅದರ ಎದುರು ಇರುವ ವಿಶಾಲ ಮೈದಾನದಲ್ಲಿ ವಾಹನ ನಿಲ್ಲಿಸುವಂತೆ ವಿನಂತಿಸಲಾಗಿದೆ
ಪುಂಜಾಲಕಟ್ಟೆ, ಗುರುವಾಯನಕೆರೆ, ಬೆಳ್ತಂಗಡಿ ಉಜಿರೆ ಕಡೆಯಿಂದ ಬರುವವರು ಜಕ್ರಿಬೆಟ್ಟಿನಿಂದ ಬಂಟ್ವಾಳ ಪೇಟೆಯ ರಸ್ತೆಯಿಂದ ಕೊಟ್ರಮಣಗಂಡಿ ಮೂಲಕ ದೇವರಕಟ್ಟೆಯ ಬಸ್ ನಿಲ್ದಾಣ ಹಾಗೂ ಅದರ ಎದುರು ಇರುವಂಥ ವಿಶಾಲ ಮೈದಾನದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ.
ವಾಹನ ನಿಲುಗಡೆಗೆ ನಿಷೇಧ
ಬಂಟ್ವಾಳ ಪೋಸ್ಟ್ ಆಫೀಸ್‌ನಿಂದ ಪೂರ್ಣಿಮಾ ಸ್ಟೋರ್‌ವರೆಗೆ ರಸ್ತೆ ಎರಡೂ ಬದಿಯಲ್ಲಿ ಯಾವುದೇ ವಾಹನವನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ದೇವಳದ ಕಡೆಯಿಂದ ಹಾಗೂ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿಯೇ ವಾಹನ ನಿಲ್ಲಿಸಿ ಸಹಕರಿಸಬೇಕಾಗಿ ದೇವಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.