ಧ್ವಜಸ್ತಂಭ ವಿವಾದ, ಲಾಠಿ ಪ್ರಹಾರ

IMG-20240214-WA0038
ವಾಡಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿರುವುದು.
Published on

ವಾಡಿ: ಧ್ವಜಸ್ತಂಭಕ್ಕೆ ಧ್ವಜ ಕಟ್ಟುವ ಸಂಬಂಧ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗುಂಪುಗಳನ್ನು ಚದುರಿಸಿದ ಘಟನೆ ಬುಧವಾರ ಸಂಜೆ ಪಟ್ಟಣದಲ್ಲಿ ನಡೆದಿದೆ.

ಗುರುವಾರ ಶ್ರೀ ಸೇವಾಲಾಲ್ ಜಯಂತ್ಯುತ್ಸವ ನಿಮಿತ್ತ ಪಟ್ಟಣದಲ್ಲಿ ಸಿದ್ಧತೆಯಲ್ಲಿ ತೊಡಗಿರುವ ಬಂಜಾರ ಸಮಾಜದ ಯುವಕರು ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿರುವ ಧ್ವಜ ಸ್ತಂಭಕ್ಕೆ ಸೇವಾಲಾಲ್ ಬಾವುಟ ಕಟ್ಟಲು ಮುಂದಾಗಿದ್ದಾಗ ಮುಸ್ಲಿಂ ಯುವಕರು ಆಕ್ಷೇಪಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎರಡು ಗುಂಪುಗಳ ಯುವಕರ ಮಧ್ಯೆ ವಾಗ್ವಾದ ಉಂಟಾಗಿದೆ. ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಕೈಮೀರುವ ಮುನ್ಸೂಚನೆ ಅರಿತು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಮೀಸಲು ಪಡೆಯನ್ನು ನಿಯೋಜಿಸಿದ್ದು, ಬಿಗಿಬಂದೋಬಸ್ತ್ ಮಾಡಲಾಗಿದೆ.

ಸೇವಾಲಾಲ್ ಜಯಂತಿ ಮೆರವಣಿಗೆ ಪ್ರಯುಕ್ತ ವಾಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಬೆಳಗ್ಗೆ ೬ರಿಂದ ಸಂಜೆ ೧೧ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net