ರಾಜ್ಯಮಟ್ಟದ ಎನ್ವೋ ಟೆಕ್ - ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಪ್ರಯುಕ್ತ ಕಾರ್ಯಕ್ರಮ

IMG-20241106-WA0015
Published on

ಪುತ್ತೂರು: ವಿವೇಕಾನಂದ ಪದವಿ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವದ ಸಂಭ್ರಮದಲ್ಲಿದ್ದು, ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಪರಿಸರವನ್ನು ಉಳಿಸಿಕೊಂಡು ತಂತ್ರಜ್ಞಾನ ಉಳಿಸಬೇಕೆಂಬ ನಿಟ್ಟಿನಲ್ಲಿ ರಾಜ್ಯಮಟ್ಟದ ಎನ್ವೋ-ಟೆಕ್ ೨೦೨೪ ಕಾರ್ಯಕ್ರಮವನ್ನು ನ.೮ರಂದು ವಿವೇಕಾನಂದ ಸ್ವರ್ಣಮಹೋತ್ಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ಹೇಳಿದರು.

ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ, ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. ನಾಳೆಯ ಒಳಿತಿಗಾಗಿ ಸುಸ್ಥಿರ ಪರಿಹಾರ ಎಂಬ ಧ್ಯೇಯದಲ್ಲಿ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ರೀತಿಯಲ್ಲಿ ಅಧ್ಯಯನ ವರದಿಯನ್ನು ತಯಾರಿಸಬೇಕಾಗಿದೆ. ವಿಶ್ವವಿದ್ಯಾಲಯಗಳನ್ನು ಸಂಪರ್ಕಿಸುವ ಕಾರ್ಯವೂ ನಡೆದಿದ್ದು, ಉತ್ತಮ ವರದಿಗಳನ್ನು ಮುಂದಿನ ದಿನದಲ್ಲಿ ಪ್ರಕಟಿಸುವ ಜತೆಗೆ ಅನುಷ್ಠಾನಗೊಳಿಸುವ ಕೆಲಸ ಮಾಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಚಾರ ಸಂಕಿರಣ ಸಂಯೋಜಕಿ ಡಾ.ವಿಜಯ ಸರಸ್ವತಿ ಮಾತನಾಡಿ ಉದ್ಘಾಟನೆಯನ್ನು ಎಂ.ಐ.ಟಿ.ಯ ಜಿಯೋಲಾಜಿ ವಿಭಾಗ ಪ್ರಾಧ್ಯಾಪಕ ಡಾ. ಕೆ. ಬಾಲಕೃಷ್ಣ ನಡೆಸಲಿದ್ದು, ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ವಹಿಸಲಿದ್ದಾರೆ. ಪರಿಸರ ತಜ್ಞ ಶಿವಾನಂದ ಕಳವೆ, ಡಾ.ಕೆ.ಬಾಲಕೃಷ್ಣ ಅವರಿಂದ ವಿವಿಧ ವಿಷಯದಲ್ಲಿ ಗೋಷ್ಠಿಗಳು ನಡೆಯಲಿವೆ. ಮೈಸೂರು, ಬೆಂಗಳೂರು, ಕೋಲಾರ ಸೇರಿ ವಿವಿಧ ಜಿಲ್ಲೆಯ ಸುಮಾರು ೧೫೦ಕ್ಕೂ ಅಽಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಕಾಲೇಜಿನಿಂದ ತಲಾ ೫ ವಿದ್ಯಾರ್ಥಿಗಳಂತೆ ವೀಕ್ಷಣೆಗೂ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್, ಪತ್ರಿಕೋಧ್ಯಮ ವಿಭಾಗ ಮುಖ್ಯಸ್ಥೆ ಭವ್ಯ ನಿಡ್ಪಳ್ಳಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net