ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಭೇಟಿ

PTR_11 APR_3
Published on

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಯುರೇಕಾ-೨೦೨೫ ನಾಲ್ಕನೇ ದಿನದ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಕ್ಷೇತ್ರ ಭೇಟಿ ಏರ್ಪಡಿಸಲಾಯಿತು.

ಮಂಗಳೂರಿನ ರಾಮಕೃಷ್ಣ ಮಿಷನ್‌ಗೆ ವಿದ್ಯಾರ್ಥಿಗಳು ಭೇಟಿ ನೀಡಿದ್ದು, ವಿದ್ಯಾರ್ಥಿಗಳಿಗೆ ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಅವರು ಆಶ್ರಮ ಮತ್ತು ಸುತ್ತಮುತ್ತಲಿನ ಪರಿಸರದ ಪರಿಚಯ ಮಾಡಿಕೊಟ್ಟರು. ಮಿಯಾವಾಕಿ ನಗರಾರಣ್ಯವನ್ನು ಸಂದರ್ಶಿಸಲಾಯಿತು.

ಆಶ್ರಮದ ಪರಿಸರದಲ್ಲಿ ವಿದ್ಯಾರ್ಥಿಗಳಿಗಾಗಿ ಪರಿಸರ ಶಾಸ್ತ್ರಜ್ಞ ದಿನೇಶ್ ಹೊಳ್ಳ ಅವರು ಪರಿಸರ ಸಂರಕ್ಷಣೆ ಹಾಗೂ ಪರಿಸರ ಪ್ರೇಮದ ಕುರಿತು ಜಾಗೃತಿ ಮೂಡಿಸುವ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಪಶ್ಚಿಮ ಘಟ್ಟವನ್ನು ಹೇಗೆ ಸಂರಕ್ಷಿಸಬಹುದು? ಇಂದಿನ ಯುವಜನತೆಯಲ್ಲಿ ಪರಿಸರ ಪ್ರೇಮ ಹಾಗೂ ಕಲೆಯ ಕುರಿತು ಜಾಗೃತಿ ಹೇಗೆ ಮೂಡಿಸಬಹುದು? ನಮ್ಮ ಮೂಲ ಪ್ರಕೃತಿ ಮತ್ತು ಸಂಸ್ಕೃತಿ ಉಳಿಸಿಕೊಳ್ಳದೆ ಹೋದರೆ ನಾವು ಎದುರಿಸಬೇಕಾಗಬಲ್ಲ ಅನಾಹುತಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ವಿದ್ಯಾರ್ಥಿಗಳಿಗೆ ಬಣ್ಣದ ಕಾಗದಗಳನ್ನು ಬಳಸಿಕೊಂಡು ವಿವಿಧ ಆಕೃತಿ ಹಾಗೂ ವಿನ್ಯಾಸಗಳನ್ನು ತಯಾರಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net