

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -೨ರಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.
ವಿಜ್ಞಾನ ವಿಭಾಗದ ತನುಷ್ ೫೯೭ ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಗಮನಗೌರಿ ಎಸ್. ಎಂ ೫೯೫ ಅಂಕಗಳೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅದಿತಿ ಕೆ ೫೯೪ ಅಂಕಗಳೊಂದಿಗೆ ಕಾಲೇಜಿಗೆ ತೃತೀಯ ಸ್ಥಾನಿಯಾಗಿದ್ದಾರೆ. ಅಚಿಂತ್ಯ ಶಾಸ್ತ್ರಿ ೫೯೩, ಸೌಮ್ಯ ಕೆ ೫೯೨, ರಶ್ಮಿ ಆರ್ ನಾಯ್ಕ್ ೫೯೧ ಅಂಕಗಳನ್ನು ಗಳಿಸಿರುತ್ತಾರೆ.