ನಾಲೆ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ

21-pnp 1
Published on

ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಸಲಹೆ

  • ಪಾಂಡವಪುರ : ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಹೇಳಿದರು.ಕಾಮಗಾರಿ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ರೈತ ಹಿತರಕ್ಷಣಾ ಸಮಿತಿ ಸದಸ್ಯರೊಂದಿಗೆ ಶುಕ್ರವಾರ ನಾಲೆ ಪ್ರದೇಶಕ್ಕೆ ಭೇಟಿ ನೀಡಿ ಅವರು ಖುದ್ದು ಪರಿಶೀಲನೆ ನಡೆಸಿ ಮಾತನಾಡಿದರು.
    ಒಟ್ಟು 330 ಕೋಟಿ ರೂ. ವೆಚ್ಚದಲ್ಲಿ 46.2 ಕಿ.ಮೀ. ನಾಲಾ ಆಧುನೀಕರಣ ಕಾಮಗಾರಿಯಲ್ಲಿ 26 ಕಿ.ಮೀ. ಮುಗಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉಳಿದಂತೆ ಇನ್ನೂ 20 ಕಿ.ಮೀ. ಲೈನಿಂಗ್ ಕೆಲಸ ಆಗಬೇಕಿದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ರೈತ ಹಿತರಕ್ಷಣಾ ಸಮಿತಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕಾಮಗಾರಿ ಗುಣಮಟ್ಟವನ್ನೂ ಪರಿಶೀಲನೆ ನಡೆಸಿದ್ದು, ಈ ವಿಷಯದಲ್ಲಿ ಅಧಿಕಾರಿಗಳು ರಾಜಿ ಆಗಬಾರದು ಎಂದು ಎಚ್ಚರಿಕೆ ನೀಡಿದ್ದೇವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net