

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ವತಿಯಿಂದ ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟದ ಸ್ಪರ್ಧೆ ಹೈದರಾಬಾದಿನಲ್ಲಿ ನಡೆದಿದ್ದು, ಅಖಿಲ ಭಾರತೀಯ ಗಣಿತ-ವಿಜ್ಞಾನ ಮೇಳ ೨೦೨೫-೨೬ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ೯ನೇ ತರಗತಿ ವಿದ್ಯಾರ್ಥಿ ಸಮೃದ್ದ್ ಆರ್. ಶೆಟ್ಟಿ ಕಿಶೋರವರ್ಗದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ‘ವಿದ್ಯುತ್ ಕಾಂತೀಯ ಪರಿಣಾಮಗಳು’ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದೆ. ನ.೧೩ರಿಂದ ೧೫ರವರೆಗೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.