ಎಸ್‌ಎಸ್‌ಎಲ್‌ಸಿ ಪ್ರಮುಖ ಘಟ್ಟ - ವ್ಯಕ್ತಿತ್ವ ವಿಕಸನ ಶಿಬಿರಕ್ಕೆ ಚಾಲನೆ ನೀಡಿ ಡಾ.ಸುರೇಶ್ ಪುತ್ತೂರಾಯ ಅನಿಸಿಕೆ

PTR_7 APR_4
Published on

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಪ್ರಮುಖ ಘಟ್ಟ. ಮುಂದಿನ ಭವಿಷ್ಯ ನಿರ್ಧರಿಸುವಲ್ಲಿ ಆಯ್ಕೆ ಮಾಡಿಕೊಳ್ಳಬೇಕಾದ ವಿಷಯಗಳ ಮಾಹಿತಿಯ ಕೊರತೆ ಈ ಹಂತದಲ್ಲಿರುತ್ತದೆ ಎಂದು ವೈದ್ಯ ಡಾ.ಸುರೇಶ್ ಪುತ್ತೂರಾಯ ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ-೨೦೨೫ ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ಡಾ.ಕೆ.ಎನ್.ಸುಬ್ರಹ್ಮಣ್ಯ ಮಾತನಾಡಿ ವ್ಯಕ್ತಿತ್ವ ವಿಕಸನ, ಜೀವನ ಕೌಶಲ, ತಂತ್ರಜ್ಞಾನ, ಕಲೆ ಮುಂತಾದ ಕ್ಷೇತ್ರದ ಸಾಧಕ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ ಎಂದರು.

ವಿವೇಕಾನಂದ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಅಧ್ಯಕ್ಷತೆ ವಹಿಸಿದ್ದರು. ಸಿಎಸ್‌ಐಆರ್ ನಿವೃತ್ತ ಹಿರಿಯ ವಿಜ್ಞಾನಿ ಡಾ.ಅನು ಅಪ್ಪಯ್ಯ ಕೆ.ಎ., ಕಾಲೇಜು ಆಡಳಿತ ಮಂಡಳಿ ನಿರ್ದೇಶಕಿ ವತ್ಸಲಾ ರಾಜ್ಞಿ, ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು. ಕಾಲೇಜಿನ ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಎನ್. ಸ್ವಾಗತಿಸಿದರು. ಉಪನ್ಯಾಸಕಿ ದಯಾಮಣಿ ಟಿ.ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net