ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ

shirady new
Published on

ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ರಸ್ತೆಯ ಶಿರಾಡಿ ಘಾಟ್ ಮಾರ್ಗದಲ್ಲಿ ಎಲ್ಲ ಬಗೆಯ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಆ ಭಾಗದಲ್ಲಿ ಯಾವುದೇ ಅಪರಾಧ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿ ನೇಮಕ, ಸೂಚನಾ ಫಲಕಗಳ ಅಳವಡಿಕೆ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜುಲೈ 22ರಂದು ಭೂಕುಸಿತ ಹಿನ್ನೆಲೆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಬಳಿಕ ಹಂತ ಹಂತವಾಗಿ ನಿರ್ಬಂಧ ತೆರವುಗೊಳಿಸುತ್ತ ಬಂದಿದ್ದು, ಈಗ ಪೂರ್ಣ ಪ್ರಮಾಣದಲ್ಲಿ ಎಲ್ಲ ರೀತಿಯ ಲಘು ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಸ್ತೆ ದುರಸ್ತಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳು ವಾಹನ ಸಂಚಾರಕ್ಕೆ ಅರ್ಹವೆಂದು ವರದಿ ನೀಡಿದ್ದರು. ಅದರಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net