

ಮಂಗಳೂರು : ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯು ಆರನೇ ದಿನಕ್ಕೆ ಕಾಲಿರಿಸಿದ್ದು ಹಗರಣದ ರೂವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಿನ ಸನ್ನಿಹಿತವಾಗುತ್ತಿದೆ. ತನ್ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪತನವಾಗಲಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜತೆ ಗುರುವಾರ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಅವರು ‘ ಅಧಿಕಾರಕ್ಕೇರಿದ ಕೇವಲ 15 ತಿಂಗಳೊಳಗೆ ಸಾವಿರಾರು ಕೋಟಿ ರೂಗಳ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸತ್ತಿರುವ ಜನತೆ ಈ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಪಾದಯಾತ್ರೆ ಈಗ ಜನಾಂದೋಲನವಾಗಿ ಬದಲಾಗಿದೆ. ಈ ಪಾದಯಾತ್ರೆ ಮುಗಿಯುವುದರೊಳಗಾಗಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ತಮ್ಮ ಘನತೆಯನ್ನು ಉಳಿಸಿಕೊಂಡರೆ ಕ್ಷೇಮ ಎಂದರು.