

ಮಂಗಳೂರು : ಬರಿದಾಗಿರುವ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈಗ ಹಿಂದು ದೇವಾಲಯಗಳ
ಆದಾಯ ಬಾಚಿಕೊಳ್ಳಲು ಸಿದ್ದವಾಗಿ ನಿಂತಿದೆ. ದೇವಸ್ಥಾನಕ್ಕೆ ಸಲ್ಲಿಸುವ ಕಾಣಿಕೆ ಹಣ ದೇವಸ್ಥಾನದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ರಾಜ್ಯದ ಜನರ ತೆರಿಗೆ ಹಣ ದುರ್ಬಳಕೆಯಾಗುತ್ತಿದೆ. ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಜನತೆ ಹತಾಶರಾಗಿದ್ದಾರೆ. ಶಾಲೆಗಳ ಪ್ರವೇಶ ದ್ವಾರದಲ್ಲಿದ್ದ ರಾಷ್ಟ್ರಕವಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಸಾಲುಗಳನ್ನು ಇಲಾಖೆಯ ಅಧಿಕಾರಿ ಬದಲಾವಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ಸಮಜಾಯಿಷಿ ನೀಡಿದೆ. ಇದರಿಂದ ಅಧಿಕಾರಿಗಳ ಮುಂದೆ ಮಂಡಿಯೂರಿ ತನ್ನ ಅಸಹಾಯಕತೆಯನ್ನು ಸರ್ಕಾೃ ರಾಜ್ಯದ ಜನತೆಯ ಮುಂದೆ ಒಪ್ಪಿಕೊಂಡಂತಾಗಿದೆ ಎಂದು ಅವರು ಹೇಳಿದರು.
ರಾಜ್ಯದ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಇಂದು ಲಿಖಿತ ರೂಪದಲ್ಲಿ ಹೇಳಿಕೆ ನೀಡಿರುವ ಸರ್ಕಾರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನಾಡಗೀತೆ ಕಡ್ಡಾಯ ಎಂದು ಮರು ಸ್ಪಷ್ಟನೆ ನೀಡಿದೆ. ರಾಜ್ಯ ಸರ್ಕಾರ ಹೀಗೆ ಒಂದಲ್ಲ ಒಂದು ಗೊಂದಲಗಳಲ್ಲೇ ನಿರತವಾಗಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
............................