ಹುಬ್ಬಳ್ಳಿ: ಇಲ್ಲಿಯ ಶ್ರೀ ವೇದವ್ಯಾಸ ಕೋ ಆಪ್ ಕ್ರೆಡಿಟ್ ಸೊಸೈಟಿ ವತಿಯಿಂದ ಗ್ರಾಹಕರ ಸೇವಾ ಕೇಂದ್ರವನ್ನು ನಗರದ ಅಕ್ಷಯ ಕಾಲನಿ ಅನುಪಮಾ ಅವೆನ್ಯೂನಲ್ಲಿ ಜೂನ್ 1ರಂದು ಬೆಳಗ್ಗೆ 10ಕ್ಕೆ ಉದ್ಘಾಟಿಸಲಾಗುತ್ತಿದೆ.
ಸಂಘದ ಸದಸ್ಯರಿಗೆ ಹೆಚ್ಚಿನ ಹಣಕಾಸಿನ ಹಾಗೂ ಸಾಮಾಜಿಕ ಸೇವೆ ನೀಡುವ ಉದ್ದೇಶದಿಂದ ಕೇಂದ್ರ ತೆರೆಯಲಾಗುತ್ತಿದೆ. ಸದಸ್ಯರು ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಶಂಕರ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.