ಗೋಡೆಯ ಮೇಲಿನ ಚಿತ್ತಾರ ಕೃತಿ ಬಿಡುಗಡೆ

mng-9july-chittara
Published on



ಮಂಗಳೂರು : ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ
ಮೂಡುತ್ತಿದೆ ಎಂದು ಬರಹಗಾರ್ತಿ ಡಾ.ಪಾರ್ವತಿ ಜಿ. ಹೇಳಿದರು.
ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ವೀಣಾ ಟಿ. ಶೆಟ್ಟಿಯವರ ಗೋಡೆಯ ಮೇಲಿನ ಚಿತ್ತಾರ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ‘ ಭಾವನೆ ಹಾಗೂ ಸಂವೇದನಶೀಲತೆಗೆ ಗೋಡೆಯ ಮೇಲಿನ ಚಿತ್ತಾರ ವೇದಿಕೆಯಾಗಿದೆ. ನಿಜ ಜೀವನ ಹಾಗೂ ಪ್ರಕೃತಿಯೊಂದಿಗಿನ ಸಂಬಂಧ ತೆರೆದುಕೊಂಡಿದೆ ಎಂದರು.
ಕೃತಿ ಪರಿಚಯ ಮಾಡಿದ ಚಿಂತಕ ಡಾ.ಅರುಣ್ ಉಳ್ಳಾಲ್ ಮಾತನಾಡಿ ಗೋಡೆಯ ಮೇಲಿನ ಚಿತ್ತಾರ ಕೃತಿಯ
ವಿಷಯ ವೈವಿಧ್ಯತೆ ಓದುಗನ ಏಕಾಗ್ರತೆ ಹೆಚ್ಚಿಸುತ್ತದೆ. ಒಂದೇ ಓದಿನಲ್ಲಿ ಅರ್ಥೈಸಿಕೊಳ್ಳಬಹುದಾದ ವಿಚಾರಗಳನ್ನು ಒಳಗೊಂಡಿದೆ ಎಂದರು.
ರಂಗಸಂಗಾತಿಯ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾರಾನಾಥ ಶೆಟ್ಟಿ ಚೇಳಾರ್, ದಿವಾಕರ ಸಾಮಾನಿ ಚೇಳಾರ್‌ಗುತ್ತು ಉಪಸ್ಥಿತರಿದ್ದರು. ಲೇಖಕಿ ವೀಣಾ ಟಿ. ಶೆಟ್ಟಿ ಸ್ವಾಗತಿಸಿದರು. ರಂಗಕರ್ಮಿ ಶಶಿರಾಜ್ ಕಾವೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net