

ಮೈಸೂರು: ನ್ಯೂ ಸಯ್ಯಜಿರಾವ್ ರಸ್ತೆಯ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ್ ಜಯಂತಿ ಅಂಗವಾಗಿ 40 ಜನ ದೇಶಪ್ರೇಮಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ನಂತರ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯ ವೀರ ಸಾವರ್ಕರ್ ವಿಚಾರವಾಗಿ ರಾಜಕೀಯ ಬೆರೆಸಬಾರದು, ಇತ್ತೀಚೆಗಷ್ಟೇ ಸರ್ವೋಚ್ಚ ನ್ಯಾಯಾಲಯ ರಾಹುಲ್ ಗಾಂಧಿಗೆ ಛೀಮಾರಿ ಹಾಕಿದೆ. ಅನೇಕ ಯುವಕರು ಇಂದಿಗೂ ಸಾವರ್ಕರ್ ಹೆಸರಿನಲ್ಲಿ ಸೇವಾಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಮಾಜಿ ಮೇಯರ್ ಸಂದೇಶ ಸ್ವಾಮಿ ಮಾತನಾಡಿ, ಸಾವರ್ಕರ್ ವಿಚಾರಗಳನ್ನು ಇಂದಿನ ಯುವಕರು ಓದಬೇಕು. ಸಾವರ್ಕರ್ ಬಗ್ಗೆ ರಾಜಕೀಯ ಕಾರಣಗಳಿಂದ ಅಪ ಪ್ರಚಾರಗಳಾಗುತ್ತಿದ್ದು, ಜನರೇ ಇಂತಹ ಸೇವಾ ಕಾರ್ಯಕ್ರಮಗಳ ಮೂಲಕ ಸೂಕ್ತ ಉತ್ತರ ನೀಡಬೇಕಿದೆ ಎಂದು ಹೇಳಿದರು.
ಬಾಲ್ಯದಲ್ಲಿಯೇ ಬಾಲಗಂಗಾಧರ ತಿಲಕ್ ಪ್ರೇರಣೆಯಿಂದ ಸ್ವಾತಂತ್ರ್ಯ ಹೋರಾಟದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಾವರ್ಕರ್ ಅವರು, ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಮಾಡಿದ ಸಂಕಲ್ಪ ಸದಾ ಸ್ಫೂರ್ತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ರಾಕೇಶ್ ಭಟ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ನಾಗಮಣಿ, ಶಿವು ಪಟೇಲ್, ಸುಚೇಂದ್ರ, ಮೀರ್ಲೆ ಪನೀಶ್, ಸುರೇಶ್, ಮಮತಾ ಹಾಗೂ ಇತರರು ಇದ್ದರು.