ವೀರಭದ್ರೇಶ್ವರ ದೇವಸ್ಥಾನದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ

12 Sirwar 2
Published on

ಸಿರವಾರ: ಪಟ್ಟಣದ ಶ್ರೀರಾಮನಗರದ ಪಂಚಲಿಂಗ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸೋಮವಾರ ವೀರಭದ್ರೇಶ್ವರ ಮತ್ತು ಬಸವಣ್ಣ ಮೂರ್ತಿ ಮರು ಪ್ರತಿಷ್ಠಾಪನೆ ಕಾರ್ಯ ನಡೆಯಿತು. ನಿಲೋಗಲ್ ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರಾವಣ ಮಾಸದಲ್ಲಿ ಧ್ಯಾನ ಹಾಗೂ ಪುಣ್ಯ ಕಾರ್ಯಗಳನ್ನು ಮಾಡಬೇಕು. ಈ ಹಿಂದೆ ದೇವಸ್ಥಾನದಲ್ಲಿದ್ದ ದೇವರ ಮೂರ್ತಿಗಳು ಮುಕ್ಕಾಗಿದ್ದರಿಂದ ನೂತನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ ಎಂದರು. ಇದಕ್ಕೂ ಮುನ್ನ ದೇವಸ್ಥಾನದ ಕಲಶವನ್ನು ಮೆರವಣಿಗೆ ಮೂಲಕ ತರಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net