ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ,

mng-4nov-abbakka
Published on


ಮಂಗಳೂರು : ಕನ್ನಡ ನಾಡು ಕಲೆ, ಸಾಹಿತ್ಯ, ಸಂಗೀತದ ತವರೂರು. ಕನ್ನಡ ಭಾಷೆಯ ಜತೆಗೆ ಕನ್ನಡ ಜನರ ಸಂಸ್ಕೃತಿಯೂ ಅತ್ಯಂತ ಶ್ರೇಷ್ಠವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ. ಹೇಳಿದರು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕುತ್ತಾರಿನ ಹೋಟೆಲ್ ವೆಜಿನೇಷನ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಮರಣೆ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರು ದಿ.ಮನೋಹರ ಪ್ರಸಾದ್ ಅವರ ಸಂಸ್ಮರಣೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಮಾತನಾಡಿ ಕಳೆದ 27ವರ್ಷಗಳಿಂದ ಅಬ್ಬಕ್ಕ ಉತ್ಸವ ಸಮಿತಿಯು ನಿರಂತರವಾಗಿ ಅಬ್ಬಕ್ಕಳ ಬಗ್ಗೆ ಹಾಗೂ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ ಎಂದರು.
ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ, ದೃಶ್ಯಗ್ರಾಹಕ ಜಯಂತ್ ಉಳ್ಳಾಲ್, ಛಾಯಾಗ್ರಾಹಕ ಜಾನ್ ಡಿಸೋಜಾ ಇವರುಗಳನ್ನು ಸನ್ಮಾನಿಸಲಾಯಿತು. ಅನುಪಮ .ಜೆ., ಕೆ.ಎಂ.ಕೆ.ಮಂಜನಾಡಿ, ಶಶಿಕಾಂತಿ ಉಳ್ಳಾಲ್ ಇವರು ಸನ್ಮಾನಿತರನ್ನು ಪರಿಚಯಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕ ಅಧ್ಯಕ್ಷ ವಸಂತ ಕೊಣಾಜೆ.ಎನ್., ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಷನ್‌ನ ಉಳ್ಳಾಲ ವಲಯದ ಉಪಾಧ್ಯಕ್ಷ ರಾಜೇಶ್ ತೊಕ್ಕೊಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ , ಹೈದರ್ ಪರ್ತಿಪ್ಪಾಡಿ, ಅಬ್ಬಕ್ಕ ಸಮಿತಿಯ ಉಪಾಧ್ಯಕ್ಷರಾದ ಯು.ಪಿ.ಆಲಿಯಬ್ಬ, ದೇವಕಿ ಉಳ್ಳಾಲ್ ಉಪಸ್ಥಿತರಿದ್ದರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಸ್ವಾಗತಿಸಿ, ಮಲ್ಲಿಕಾ ಭಂಡಾರಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net