ವೀರಶೈವ ಸಮಾಜದ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ

veerashaiva
Published on

ಮಡಿಕೇರಿ:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾಕೂಟ ಡಿಸೆಂಬರ್ ತಿಂಗಳಲ್ಲಿ ಕುಶಾಲನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ. ಶಿವಪ್ಪ ತಿಳಿಸಿದ್ದಾರೆ. ೨೦೨೩-೨೪ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ. ೮೫ ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ೨ ಪಾಸ್ ಪೋರ್ಟ್ ಸೈಜ್ ಫೋಟೋ, ಕೈಬರಹದ ಅರ್ಜಿಯೊಂದಿಗೆ, ಅಂಕಪಟ್ಟಿ ಲಗತ್ತಿಸಿ ಡಿ.೫ರ ಒಳಗಾಗಿ ಕಳುಹಿಸಿಕೊಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿ. ೨೫ಕ್ಕೆ ಕುಶಾಲನಗೆ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮೊದಲು ಸಮುದಾಯ ಬಾಂಧವರಿಗೆ ಡಿ.೨೨ ರಂದು ಕುಶಾಲನಗರ ಜಿಎಂಪಿ ಶಾಲಾ ಮೈದಾನದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿದೆ. ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಯ್ಯ, #೫೪೧, ೪ನೇ ಬ್ಲಾಕ್, ಶಿವರಾಮಕಾರಂತ ಬಡಾವಣೆ, ಕುಶಾಲನಗರ ಇಲ್ಲಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಯ್ಯ, ಉಪಾಧ್ಯಕ್ಷ ಎಸ್.ಎಸ್. ಸುರೇಶ್, ಹೆಚ್.ಜೆ ಪ್ರವೀಣ್ ಕುಮಾರ್, ನಿರ್ದೇಶಕ ಪಿ. ಮಹದೇವಪ್ಪ, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಕೆ.ಪಿ. ಆದರ್ಶ್, ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ರಾಜೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net