ಜ್ಞಾನವಂತರಾಗಲು ಶಿಕ್ಷಕರು ಕಾರಣ

Untitled design (1)
ರಾಯಚೂರಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಂಸದ ರಾಜಾ ಅಮರೇಶ್ವರ ನಾಯಕ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಶರಣಬಸವ ಪಾಟೀಲ್, ನಟಿ ಡಾ.ಮಾಲತಿಗೌಡ, ಫಾತಿಮಾ ಫೌಂಡೇಷನ್ ಅಧ್ಯಕ್ಷೆ ಡಾ.ಫಾತಿಮಾ ಹುಸೇನ್, ಸಾವಿತ್ರಿಭಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಎಚ್.ವೈ.ಸರಸ್ವತಿ, ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಇದ್ದರು.
Published on

ರಾಯಚೂರು: ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕಲಾ ಸಂಕುಲ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಭಾನುವಾರ ಮಾತನಾಡಿದರು.

ಜ್ಞಾನವಂತರಾಗಲು ಶಿಕ್ಷಕರು ಮೂಲ ಕಾರಣೀಕರ್ತರಾಗಿದ್ದಾರೆ. ವ್ಯವಸ್ಥೆ ಸುಧಾರಣೆ, ಮಾನವೀಯ ಗುಣಗಳನ್ನು ಬೆಳೆಸಲು ಶಿಕ್ಷಕರ ಕೊಡುಗೆ ಅಪಾರವಿದೆ. ಗುರುಗಳ ಆರ್ಶೀವಾದರಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದರು.

ಶಿಕ್ಷಕರ ಕೊಡುಗೆ ಅಪಾರ

ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಎ.ವಸಂತಕುಮಾರ ಮಾತನಾಡಿ, ಶಿಕ್ಷಕರಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯವಿದೆ. ಅವರಿಂದ ಹಲವರು ಜೀವನ ಕಂಡುಕೊಂಡಿದ್ದಾರೆ. ಶಿಕ್ಷಕರನ್ನು ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಶರಣಬಸವ ಪಾಟೀಲ್, ನಟಿ ಡಾ.ಮಾಲತಿಗೌಡ, ಫಾತಿಮಾ ಫೌಂಡೇಷನ್ ಅಧ್ಯಕ್ಷೆ ಡಾ.ಫಾತಿಮಾ ಹುಸೇನ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಎಚ್.ವೈ.ಸರಸ್ವತಿ, ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net