ಸಮಾಜಮುಖಿ ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ

24tnpnewsfile02
Published on

ತಿ.ನರಸೀಪುರ: ಸಂಘ-ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಪ್ರಗತಿ ಸಾಧ್ಯ ಎಂದು ವಾಟಾಳು ಮಠಾಧ್ಯಕ್ಷ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ವಿವೇಕಾನಂದ ನಗರದ ವೀರಶೈವ ವಸತಿ ನಿಲಯದಲ್ಲಿ ಭಾನುವಾರ ಆಯೋಜಿಸಿದ್ದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜ್ಞಾವಂತ ನೌಕರರು ಸಮಾಜಕ್ಕೆ ಉಪಯುಕ್ತ ಚಿಂತನೆಗಳ ಯೋಜನೆಗಳನ್ನು ನೀಡಬೇಕು. ಮಾದರಿ ಸಂಘ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುವ ಮೂಲಕ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸುವಂತೆ ಸಲಹೆ ನೀಡಿದರು.
ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಪಟ್ಟಣದಲ್ಲಿ ನೌಕರರ ಸಂಘದ ಭವನ ನಿರ್ಮಾಣವಾಗುತ್ತಿದ್ದು, ಇದನ್ನು ಪೂರ್ಣಗೊಳಿಸಿ ಶೀಘ್ರದಲ್ಲೇ ಉದ್ಘಾಟಿಸಬೇಕು ಎಂದು ಹೇಳಿದರು.

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಾದ ಚೌಹಳ್ಳಿ ಲಿಂಗರಾಜಪ್ಪ, ಬಿಲಿಗೆರೆಹುಂಡಿ ಶಿಕ್ಷಕ ಸಿದ್ದರಾಜು ಹಾಗೂ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸಂಘದಿಂದ ಹೊರತಂದಿರುವ 2024ನೇ ಸಾಲಿನ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಕಾರ್ಯದರ್ಶಿ ಪರಶಿವಮೂರ್ತಿ, ಪಿಡಿಒ ರಾಜಶೇಖರ್, ಸ್ಫಟಿಕ ವಿವಿಧೋದ್ದೇಶ ಸಂಘದ ಅಧ್ಯಕ್ಷ ರಾಜೇಶ್, ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಮಹೇಶ್, ಪ್ರಧಾನ ಕಾರ್ಯದರ್ಶಿ ಎಂ.ವಿ.ಮಹದೇವಸ್ವಾಮಿ, ಖಜಾಂಚಿ ಜಿ.ಸಿದ್ದಮಲ್ಲಪ್ಪ, ಮುಖ್ಯ ಶಿಕ್ಷಕರಾದ ಶಂಕರ್, ವಿದ್ಯೋದಯ ಶಿಕ್ಷಣ ಸಂಸ್ಥೆಯ ಸುಧಾ, ಎಂ.ವಿ.ಮಹದೇವಸ್ವಾಮಿ, ಗಿರೀಶ್, ಮಹೇಶ್, ಸಿದ್ದ ಮಲ್ಲಪ್ಪ ಹಾಗೂ ವೀರಶೈವ ನೌಕರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net