ನ.19ರಂದು ವಿಶ್ವಗುರು ಬಸವೇಶ್ವರರ ಜಯಂತ್ಯುತ್ಸವ: ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ್ ಮಾಹಿತಿ

Veerashaiva Lingayat Mahasabha press conference Mandya
Published on

ಮಂಡ್ಯ: ಬಸವ ಸಮಿತಿ, ಜಗದ್ಗುರು ರೇಣುಕಾಚಾರ್ಯರ ಸೇವಾ ಸಮಿತಿ, ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನ.19ರಂದು ನಗರದಲ್ಲಿ ಜಗದ್ಗುರು ರೇಣುಕಾಚಾರ್ಯ ಮತ್ತು ವಿಶ್ವಗುರು ಬಸವೇಶ್ವರರ ಜಯಂತ್ಯುತ್ಸವ ಹಾಗೂ ಮಠಾಧಿಪತಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ತಿಳಿಸಿದರು.

ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿನ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಿರುವ ಸಮಾರಂಭದ ಸಾನಿಧ್ಯವನ್ನು ಕನಕಪುರ ದೇಗುಲ ಮಠದ ಡಾ.ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ, ಕನಕಪುರ ಮರಳೆ ಗವಿಮಠದ ಡಾ.ಮುಮ್ಮಡಿ ಶಿವರುದ್ರ ಮಹಾಸ್ವಾಮೀಜಿ, ಚಂದ್ರವನದ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಕೆ.ಆರ್.ಪೇಟೆ ತೆಂಡೆಕೆರೆ ಬಾಳೆ ಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಮಳವಳ್ಳಿ ಧನಗೂರಿನ ವೀರ ಸಿಂಹಾಸನ ಸಂಸ್ಥಾನ ಮಠದ ಮುಮ್ಮಡಿ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯಸ್ವಾಮಿ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ರವಿಕುಮಾರ್ ಗಣಿಗ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಬಸವ ಸಮಿತಿ ಅಧ್ಯಕ್ಷ ಎಂ.ಬಿ.ರಾಜಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ, ನಿವೃತ್ತ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ಸಂಸ್ಕೃತ ವಿ.ವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ಶಿವಕುಮಾರಸ್ವಾಮಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಉದ್ಯಮಿ ಎಂ.ಆರ್.ಉಮಾಪತಿ ಭಾಗವಹಿಸುವರು. ಇದೇ ವೇಳೆ ಸಹಕಾರ ಸಂಘಗಳ ಉಪ ನಿಬಂಧಕ(ಪ್ರಭಾರ) ಎಚ್.ಆರ್.ನಾಗಭೂಷಣ್ ಅವರನ್ನು ಅಭಿನಂದಿಸಲಾಗುವುದು ಎಂದು ವಿವರಿಸಿದರು.

ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್.ಶಿವಪ್ರಕಾಶ್, ಷಡಕ್ಷರಿ, ಗುರುಸ್ವಾಮಿ, ರಮೇಶ್, ಕುಳ್ಳಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net