ಬಸವ ಭವನ ನಿರ್ಮಾಣ ನೆರವು ನೀಡಲಿ: ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್ ಮನವಿ

Veerashaiva Lingayat Mahasabha press conference Mandya
Published on

ಮಂಡ್ಯ: ಜಿಲ್ಲೆಯಲ್ಲಿ ನೂತನ ಬಸವ ಭವನ ಹಾಗೂ ಬಸವ ಪುತ್ಥಳಿ ನಿರ್ಮಾಣಕ್ಕೆ ರಾಜ್ಯಸರ್ಕಾರ ನೆರವು ನೀಡುವಂತೆ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್ ಮನವಿ ಮಾಡಿದರು.

ಮೇ 31ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಸಮಿತಿ ವತಿಯಿಂದ ನಡೆದ ಬಸವಣ್ಣನವರ 892ನೇ ಜಯಂತ್ಯುತ್ಸವ ಕಾರ್ಯಕ್ರಮ ಐತಿಹಾಸಿಕ ಯಶಸ್ಸು ಕಂಡಿದೆ. ಇದಕ್ಕೆ ಸಹಕರಿಸಿದ ಎಲ್ಲ ಬಸವಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಲೂಕು ಅಧ್ಯಕ್ಷರಾದ ಬುಳ್ಳಪ್ಪ, ಗೌರಿಶಂಕರ್, ಬಸವ ಸಮಿತಿ ಕಾರ್ಯಾಧ್ಯಕ್ಷ ಕೆಂಪಯ್ಯ, ಕೆ.ಎಸ್.ಷಡಕ್ಷರಿ, ಎ.ಎಂ.ಈರಣ್ಣ, ಬಸವ ಸಮಿತಿ ಅಧ್ಯಕ್ಷ ಎಂ.ಬಿ.ರಾಜಶೇಖರ್, ನಿರ್ದೇಶಕ ಕುಮಾರಸ್ವಾಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net