

ಬಾಳೆಹೊನ್ನೂರು: ದಾವಣಗೆರೆಯ ಶ್ರೀಮದಭಿನವ ರೇಣುಕ ಮಂದಿರದಲ್ಲಿ ಜು.21,22 ರಂದು ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ನಡೆಯಲಿದ್ದು, ಶ್ರೀ ಜಗದ್ಗುರು ಪಂಚಪೀಠಾಧೀಶ್ವರರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ವೀರಶೈವ ಲಿಂಗಾಯತ ಸಂಸ್ಕೃತಿ ಸಂವರ್ಧನೆ ಹಾಗೂ ಜಾತಿ ಗಣತಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ನಿಲುವು ಕುರಿತಾದ ಚರ್ಚೆ ಈ ಶೃಂಗ ಸಮ್ಮೇಳನದಲ್ಲಿ ನಡೆಯಲಿದ್ದು, 21ರಂದು ಬೆಳಗ್ಗೆ 11ಗಂಟೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಸಂಸದ ಜಗದೀಶ್ ಶೆಟ್ಟರ್, ಹೈಕೋರ್ಟ್ ನಿವತ್ತ ನ್ಯಾಯಾಧೀಶ ಶಿವರಾಜ ಪಾಟೀಲ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವೀರಶೈವ ಲಿಂಗಾಯತ ಅಭಿವದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪ ಭಾಗವಹಿಸಲಿದ್ದಾರೆ.
ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಎಮ್ಮಿಗನೂರು ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಅ.ಭಾ.ವೀ.ಮಹಾಸಭೆ ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಉಪಾಧ್ಯಕ್ಷ ಅಥಣಿ ವೀರಣ್ಣ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್. ಶಿವಯೋಗಿಸ್ವಾಮಿ, ಜಿಪಂ ಮಾಜಿ ಸದಸ್ಯ ಬಿ.ಎಂ.ವಾಗೀಶಸ್ವಾಮಿ ಭಾಗವಹಿಸಲಿದ್ದಾರೆ.
ಜು.22ರಂದು ನಡೆಯುವ ಶೃಂಗ ಸಮ್ಮೇಳನವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಬಿ.ವೈ.ರಾಘವೇಂದ್ರ, ವಿಆರ್‌ಎಲ್ ಸಮೂಹ ಸಂಸ್ಥೆಯ ಛೇರ‌್ಮನ್ ಡಾ.ವಿಜಯ ಸಂಕೇಶ್ವರ, ಮಾಜಿ ಸಂಸದ ಜಿ.ಎಂ.ಸಿದ್ಧೇಶ್ವರ, ಶಾಸಕರಾದ ಸಿ.ಸಿ.ಪಾಟೀಲ, ಬಿ.ಪಿ.ಹರೀಶ್, ಮಾಜಿ ಶಾಸಕರಾದ ಎಚ್.ಎಸ್.ಶಿವಶಂಕರ್, ಮಹಿಮಾ ಪಟೇಲ್ ಭಾಗಹಿಸುವರು.