ವೀರಶೈವ ಧರ್ಮ ಒಡೆಯಲು ಬಿಡಲ್ಲ

Veerashaiva, Dharma, Shamanur Shivashankarappa,
Published on

ದಾವಣಗೆರೆ: ವೀರಶೈವ ಲಿಂಗಾಯತರೆಲ್ಲರೂ ಒಂದೇ. ಧರ್ಮ ಒಡೆಯಲು ಬಿಡುವುದಿಲ್ಲ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆಗೆ ಪ್ರಯತ್ನ ನಡೆದಿದೆ. ಗಾಣಿಗ, ಪಂಚಮಸಾಲಿ, ಸಾದರ ಸೇರಿ ಎಲ್ಲಾ ವೀರಶೈವ ಒಳಪಂಗಡಗಳನ್ನು ಒಟ್ಟಿಗೆ ಸೇರಿಸಿಕೊಂಡು ಹೋಗಬೇಕೆನ್ನುವುದೇ ನಮ್ಮ ಧ್ಯೇಯ ಎಂದರು.

ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ 3 ರೂ.ಗೆ ಏರಿಕೆ ಮಾಡಿದೆ. ಇದರಿಂದ ಹೆಚ್ಚಿನ ಹೊರೆಯಾಗದು ಎಂದು ಸಮರ್ಥಿಸಿಕೊಂಡರು. ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ ಎಂಬುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಅವರೊಂದಿಗೆ ಚರ್ಚಿಸುತ್ತೇನೆ ಎಂದರು.

ದಾವಣಗೆರೆಯ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಹೆಸರನ್ನು ಮರುನಾಮಕರಣ ಮಾಡಲು ಬಿಜೆಪಿಯವರು ವಿರೋಧ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್ಸೆಸ್ ‘ಅವರು ಏನಾದರೂ ಮಾಡಿಕೊಳ್ಳಲಿ. ಮುಂದೆ ಆನೆ ಹೋಗುತ್ತಿದ್ದರೆ ನಾಯಿಗಳು ಬೊಗಳುವುದು ಸಹಜ’ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net