ವೀರೇಂದ್ರ ಹೆಗ್ಗಡೆ ಪ್ರವಾಸ ಇಂದು

Published on

ಹಾವೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾವೇರಿ, ಕಬ್ಬೂರು ಗ್ರಾಮ ಪಂಚಾಯಿತಿ ಹಾಗೂ ಕೇಂದ್ರ ಸರ್ಕಾರದ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಲಾದ ತಾಲೂಕಿನ ಕಬ್ಬೂರ ಗ್ರಾಮದ ಕೆರೆ ಲೋಕಾರ್ಪಣೆ ಕಾರ್ಯಕ್ರಮವನ್ನು ಮಾ.2ರಂದು ಸಂಜೆ 4.30ಕ್ಕೆ ಮಾಲತೇಶ ದೇವಸ್ಥಾನದ ಆವಣದಲ್ಲಿ ಆಯೋಜಿಸಲಾಗಿದೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೆರೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ವೇಳೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ಸಂಸದ ಶಿವಕುಮಾರ ಉದಾಸಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ಜಿಪಂ ಸಿಇಒ ಅಕ್ಷಯ ಶ್ರೀಧರ, ಗ್ರಾಪಂ ಅಧ್ಯಕ್ಷೆ ಮಾಳವ್ವ ಕರಿಗಾರ, ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net