ಶ್ರಮದಿಂದಲೇ ಬಂಜಾರರ ಉನ್ನತಿ

16 CHN
Published on

ಚನ್ನಗಿರಿ: ಲಂಬಾಣಿ ಜನಾಂಗದವರು ಶ್ರಮಜೀವಿಗಳು. ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಹಿಂದುಳಿದರೂ ಕಷ್ಟಪಟ್ಟು ಮೇಲೆ ಬರುತ್ತಿದ್ದಾರೆ ಎಂದು ಅರಣ್ಯ ಇಲಾಖೆ ನಿವೃತ್ತ ಅಧಿಕಾರಿ ಬಿ.ಎನ್. ವೀರೇಶ್​ನಾಯ್ಕ ತಿಳಿಸಿದರು.

ಇಲ್ಲಿನ ತಾಲೂಕು ಕಚೇರಿಯಲ್ಲಿ ಶನಿವಾರ ತಾಲೂಕು ಆಡಳಿತ ಹಾಗೂ ತಾಲೂಕು ಬಂಜಾರ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಅವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ಬಂಜಾರರು ಕಾಡುಗಳಲ್ಲಿ ಹೆಚ್ಚಾಗಿ ವಾಸವಿದ್ದ ಜನಾಂಗವಾಗಿದೆ. ಸರ್ಕಾರದ ಮೀಸಲಾತಿಯಡಿ ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದರಿಂದಲೇ ಅವರು ಇಂದು ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಶೌರ್ಯ, ಸಂಸ್ಕೃತಿ ಹಾಗೂ ಅಧ್ಯಾತ್ಮದಲ್ಲಿ ತನ್ನದೇ ಆದ ಉಡುಗೆ, ಭಾಷೆಯನ್ನು ಹೊಂದಿದೆ. ಸಮಾಜದಲ್ಲಿ ಶಾಂತಿ ಕಾಪಾಡುವಲ್ಲಿ ಪ್ರಧಾನಿ, ಗೃಹಮಂತ್ರಿ ಮತ್ತು ರಾಷ್ಟ್ರಪತಿ ಆಡಳಿತದ ನಿಯಮ ಮಾಡಿಕೊಂಡಿದ್ದರು. ಇಂದಿಗೂ ಲಂಬಾಣಿ ಸಮಾಜ ಸಂವಿಧಾನದ ಬುನಾದಿಯಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಚಂದ್ರನಾಯ್ಕ ಮಾತನಾಡಿ, ರಾಜ್ಯದಲ್ಲಿ ಒಟ್ಟು 3300 ತಾಂಡಗಳು ಇದೆ. ಅವರ ಭಾಷೆ ಲಂಬಾಣಿ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ತಾಂಡಗಳಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಿ ಬಂಜಾರ ಸಮುದಾಯದ ಮಕ್ಕಳಿಗೆ ಶಿಕ್ಷಣ ಕಲ್ಪಿಸಬೇಕು. ದೊಡ್ಡ ಸಂಖ್ಯೆಯಲ್ಲಿರುವ ಬಂಜಾರ ಜನಾಂಗವನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು.

ತಹಸೀಲ್ದಾರ್ ಶಂಕರಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಬಿ.ಕೆ. ಉತ್ತಮ್ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ಅಶೋಕ್, ನಿರ್ಮಲಾಬಾಯಿ ಗಣೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net