ಮರದ ದಿಮ್ಮಿ ಸಾಗಿಸುತ್ತಿದ್ದ ವಾಹನ ವಶ

Oplus_16777216
ಪೊಲೀಸರ ಕಣ್ಡಪ್ಪಿಸಿ ಬದಲಿ ವಾಹನದಲ್ಲಿ ಮರದ ದಿಮ್ಮಿಗಳನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದ ಲಾರಿ.
Published on

ಸಿದ್ದಾಪುರ: ಕಾನೂನುಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನು ಬುಧವಾರ ಮಾಲು ಸಮೇತ ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸರಕು ಸಹಿತ ಭಾರಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಈ ಮಧ್ಯೆಯೂ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ಲಾರಿ ಸಿದ್ದಾಪುರದ ಅಂಬೇಡ್ಕರ್ ನಗರ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು. ಪೊಲೀಸರ ಕಣ್ತುಪ್ಪಿಸಿ ಮರದ ದಿಮ್ಮಿಗಳನ್ನು ಬೇರೆ ಲಾರಿಗೆ ತುಂಬಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾಲು ಸಹಿತ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net