

ಶಿಗ್ಗಾಂವಿ: ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಪಟ್ಟಣದ ಪ್ರವಾಸಿ ಮಂದಿರದ ಕ್ರಾಸ್ ಬಳಿ ಬುಧವಾರ ನಡೆದಿದೆ.
ಪಟ್ಟಣದ ವೀರಗಲ್ಲಿ ನಿವಾಸಿ ಶಂಕ್ರಮ್ಮ ಶಿವಯ್ಯ ಪೂಜಾರ (88) ಮೃತ ದುರ್ದೈವಿ.
ಇವರು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.