ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

accident logo
Published on

ಜಗಳೂರು: ಇಲ್ಲಿನ ಹಳೆ ಮಹಾತ್ಮ ಗಾಂಧಿ ವೃತ್ತದ ಬಳಿ ಮಿನಿ ಸರಕು ಸಾಗಾಣೆ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬ ಸೋಮವಾರ ಮೃತಪಟ್ಟಿದ್ದಾನೆ.

ತಾಲೂಕಿನ ಗೊಲ್ಲರಹಟ್ಟಿಯ ವ್ಯಾಪಾರಿ ಹೊನ್ನೂರ್ ಸಾಬ್ (55) ಮೃತ ವ್ಯಕ್ತಿ. ಗೊಲ್ಲರಹಟ್ಟಿ ಗ್ರಾಮದಿಂದ ಜಗಳೂರು ಪಟ್ಟಣಕ್ಕೆ ಆಗಮಿಸುತ್ತಿದ್ದಾಗ ಮಹಾತ್ಮಗಾಂಧಿ ವೃತ್ತದಲ್ಲಿ ಬಳಿ ವೇಗವಾಗಿ ಬಂದ ಮಿನಿ ಸರಕು ಸಾಗಾಣೆ ವಾಹನ ಡಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದರಿಂದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾಹನ ಚಾಲಕ ಜಯಣ್ಣ ವಿರುದ್ಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳಕ್ಕೆ ಸಬ್‌ಇನ್ಸ್‌ಸ್ಪೆಕ್ಟರ್ ಎಸ್.ಡಿ. ಸಾಗರ್ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net