ಚುನಾವಣಾ ಕರ್ತವ್ಯಕ್ಕೆ ತೆರಳಲು ವಾಹನ ವ್ಯವಸ್ಥೆ

DC_Vehicle
Published on

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ/ಸಿಬ್ಬಂದಿ ಏ.26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುವಾಗುವಂತೆ ಆಯಾ ತಾಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ.

ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ಮತಗಟ್ಟೆ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕು ಕೇಂದ್ರ ಸ್ಥಾನದಿಂದ ಅವರನ್ನು ನೇಮಕ ಮಾಡಿದ ವಿಧಾನಸಭಾ ಕ್ಷೇತ್ರಗಳಿಗೆ ಕಳುಹಿಸಿಕೊಡಲು ಏ.25ರಂದು ಬೆಳಗ್ಗೆ 6 ಕ್ಕೆ ವಾಹನ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ/ಸಿಬ್ಬಂದಿ ವಾಹನ ವ್ಯವಸ್ಥೆಯ ಪ್ರಯೋಜನ ಪಡೆದು ನೇಮಕವಾದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ಹೋಗಲು ತಿಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯು ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ವಾಹನ ಹೊರಡುವ ಸ್ಥಳ :ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಸಿಬ್ಬಂದಿಗೆ ವಿಜಯನಗರದಲ್ಲಿರುವ ಸರ್ವೋದಯ ಪ್ರೌಢಶಾಲೆ ಹಾಗೂ ಸೋಮೇಶ್ವರ ಬಾಲಕಿಯರ ಪ್ರೌಢಶಾಲೆ; ತುಮಕೂರು ನಗರ : ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು; ಗುಬ್ಬಿ : ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು; ಚಿಕ್ಕನಾಯಕನಹಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಿಂದ ವಾಹನ ವ್ಯವಸ್ಥೆ ಇರಲಿದೆ.

ತಿಪಟೂರು ಕ್ಷೇತ್ರದ ಸಿಬ್ಬಂದಿಗೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು; ತುರುವೇಕೆರೆ ಸರ್ಕಾರಿ ಜೂನಿಯರ್ ಕಾಲೇಜು; ಕುಣಿಗಲ್ ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು; ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು; ಶಿರಾ : ಜ್ಯೋತಿನಗರದ ಸರ್ಕಾರಿ ಪ್ರಥಮ ದರ್ಜೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು; ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು; ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಾಹನ ಹೊರಡಲಿದ್ದು, ನಿಗಧಿತ ಸಮಯಕ್ಕೆ ಸರಿಯಾಗಿ ಮತಗಟ್ಟೆ ಅಧಿಕಾರಿ/ಸಿಬ್ಬಂದಿ ವಾಹನ ಹೊರಡುವ ಸ್ಥಳದಲ್ಲಿ ಹಾಜರಿರುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net