ಭೀಕರ ಅಪಘಾತ; ಕೃಷಿ ಇಲಾಖೆಯ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವು

accident
Published on

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಕೃಷಿ ಇಲಾಖೆಯ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.

ಕೃಷಿ ಇಲಾಖೆಯ ಅಧಿಕಾರಿ ವಿನಯ್​ ಹಾಗೂ ಗುತ್ತಿಗೆ ನೌಕರ ಲೋಕೇಶ್ ಸಾವಿಗೀಡಾದವರು. ಕೃಷಿ ಸಚಿವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಇವರು ಮರಳಿ ಹೋಗುವಾಗ ಅಪಘಾತ ಸಂಭವಿಸಿದೆ.

ಚಿಂತಾಮಣಿಯಿಂದ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ ಇವರು, ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುವಾಗ ಶಿಡ್ಲಘಟ್ಟದ ಪಿಂಡಿಪಾಪನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನವೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net