ಬೃಹತ್ ಮರ ಉರುಳಿ ವಾಹನ ಸಂಚಾರಕ್ಕೆ ತೊಂದರೆ

huge tree
ಗುರುವಾರ ರಾತ್ರಿ ಬೃಹತ್ ಗಾತ್ರ ಮರವೊಂದು ಗಾಳಿಯ ರಭಸಕ್ಕೆ ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು
Published on

ಕಾರ್ಕಳ: ಮುಂಡ್ಕೂರು ಗ್ರಾಮದ ನಾನಿಲ್ತಾರು ಎಂಬಲ್ಲಿ ಗುರುವಾರ ರಾತ್ರಿ ಬೃಹತ್ ಗಾತ್ರ ಮರವೊಂದು ಗಾಳಿಯ ರಭಸಕ್ಕೆ ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಕೂಡಲೇ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟಿಂಗ್ ಯಂತ್ರ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಬೆಳ್ಮಣ್‌ನಿಂದ ಕಟೀಲು ಬಜ್ಪೆ ಸಾಗಿವ ರಾಜ್ಯ ಹೆದ್ದಾರಿಯಾಗಿದ್ದು, ಕೆಲ ಹೊತ್ತು ವಾಹನ ಸವಾರರು ಪರದಾಟ ನಡೆಸುವಂತಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net