

ಸೋಮವಾರಪೇಟೆ: ಕಕ್ಕೆಹೊಳೆ ಜಂಕ್ಷನ್‌ನಲ್ಲಿರುವ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸದ ಅಂಗವಾಗಿ ಸೋಮವಾರ ಸಂಜೆ ಶ್ರೀಮುತ್ತಪ್ಪನ್ ದೇವರ ವೆಳ್ಳಾಟಂ ನಡೆಯಿತು.
ಕೇರಳದ ಸಿಂಗಾರಿ ಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಳಸದ ಮೆರವಣಿಗೆ ನಡೆಯಿತು. ಮಾಜಿ ಸಚಿವ ಅಪ್ಪಚ್ಚುರಂಜನ್ ಚಾಲನೆ ನೀಡಿದರು. ವಿಷ್ಣುಮೂರ್ತಿ ದೇವರ ವೆಳ್ಳಾಟಂ, ಕರಿಂಗುಟ್ಟಿ ಚಾತನ್ ದೇವರ ವೆಳ್ಳಾಟಂ, ಕಂಡಕರ್ಣ ದೇವರ ವೆಳ್ಳಾಟಂ, ಭಗವತಿ ದೇವಿಯ ವೆಳ್ಳಾಟಂ, ರಕ್ತಚಾಮುಂಡಿ ದೇವಿ, ಪೊಟ್ಟನ್ ದೇವರ ವೆಳ್ಳಾಟಂ ಜರುಗಿತು. ನಂತರ ದೇವರ ಕಳಿಕ್ಕಾಪಾಟ್ ನೆರವೇರಿತು.
ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ, ಮುತ್ತಪ್ಪನ್ ದೇವಾಲಯದ ಮಡಯನ್ ಸುಧೀಶ್ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.