ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಸಮೀಪದ ಹುಲಿಗಿನಮುರಡಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಜು.26ರಂದು ಚಿಕ್ಕ ಜಾತ್ರೆ ನಡೆಯಲಿದೆ. ಮುಜರಾಯಿ ಇಲಾಖಾಗೆ ಸೇರಿದ ಬೆಟ್ಟದಲ್ಲಿ ಮೊದಲನೇ ಶ್ರಾವಣ ಶನಿವಾರದ ಅಂಗವಾಗಿ ಚಿಕ್ಕ ಜಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜು.23ರಿಂದ ಪ್ರತಿ ದಿನ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 12 ಗಂಟೆಗೆ ವೆಂಕಟರಮಣಸ್ವಾಮಿ ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.