ಗುಂಡ್ಲುಪೇಟೆ: ತಾಲೂಕಿನ ಶ್ರೀ ಹುಲಿಗನಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ಜ.15ರಂದು ರಥೋತ್ಸವ ನಡೆಯಲಿದ್ದು, ದರ್ಶನಕ್ಕೆ ಬರುವ ಭಕ್ತಾದಿಗಳು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಾತ್ರ ಸಂಚರಿಸಲು ಅವಕಾಶ ಮಾಡಲಾಗಿದೆ ಎಂದು ಮುಜರಾಯಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿಚಕ್ರ ಸೇರಿದಂತೆ ಎಲ್ಲ ಇತರ ವಾಹನಗಳಲ್ಲಿ ಬರುವ ಭಕ್ತಾದಿಗಳು ಬೆಟ್ಟದ ತಪ್ಪಲಿನಲ್ಲಿ ಪಾರ್ಕಿಂಗ್ ಮಾಡಿ ಸಾರಿಗೆ ಬಸ್‌ಗಳಲ್ಲಿ ಮಾತ್ರ ದೇವರ ದರ್ಶನಕ್ಕೆ ಹೋಗಿ ಬರುವ ವ್ಯವಸ್ಥೆ ಮಾಡಲಾಗಿದೆ. ಶ್ರೀ ಹುಲುಗನಮುರಡಿ ವೆಂಕಟರಮಣಸ್ವಾಮಿ ಜಾತ್ರೆ ಅಂಗವಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲು ಪ್ರಸಾದ ಮಾಡಿಸುವ ಭಕ್ತರು ತಮ್ಮ ವಿಳಾಸದೊಂದಿಗೆ ಪೂರ್ವಭಾವಿಯಾಗಿ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.