

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಮಧುನಾಯ್ಕ ಲಂಬಾಣಿ ನೇಮಕಕ್ಕೆ ಅಧಿಕೃತ ಅನುಮೋದನೆ ನೀಡಿದ್ದಾರೆ. ಸಂಘಟನೆಯಿಂದ ನುಡಿ ವೈಭವ, ಸಂಗೀತ ಗಾಯನ ಸ್ಪರ್ಧೆ, ನೃತ್ಯ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಮುಂತಾದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಆನ್‌ಲೈನ್ ಮೂಲಕವೂ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ.