

ಉಡುಪಿ: ದೂರದರ್ಶನ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಸೋಮವಾರ ರಾತ್ರಿ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 2014 ರಿಂದ 17ರವರೆಗೆ ಸೇವೆ ಸಲ್ಲಿಸಿದ್ದ ಅವರು, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ ಸುವರ್ಣ ನಿಧನಕ್ಕೆ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘ, ಫೊಟೊಗ್ರಾಫರ್ಸ್ ಅಸೋಸಿಯೇಶನ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್, ಶಾಸಕ ಯಶಪಾಲ್ ಸುವರ್ಣ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.