ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

14 Dwd 6 New Dr. Panchaxari Hiremath
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿಯ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಡಾ. ಪಂಚಾಕ್ಷರಿ ಹಿರೇಮಠ (92) ಶುಕ್ರವಾರ ನಿಧನ ಹೊಂದಿದರು. ಅವÀರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933ರ ಜ. 6ರಂದು ಜನಿಸಿದ ಪಂಚಾಕ್ಷರಿ ಹಿರೇಮಠ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅಪ್ಪಟ ದೇಶಪ್ರೇಮಿ, ಸ್ವಾತಂತ್ರ‍್ಯ ಹೋರಾಟಗಾರ ಹಾಗೂ ಬಹುಭಾಷಾ ವಿಶಾರದರು. ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ವಾಗ್ಮಿಯಾಗಿದ್ದರು.

ಹಿರೇಮಠರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿAದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊAಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

ಸೋವಿಯತ್ ಲ್ಯಾಂಡ್ ನೆಹರೂ ಅವಾರ್ಡ್, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ (ಅನುವಾದ), ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕಮಲಾ ಗೋಯೆಂಕಾ -Ëಂಡೇಷನ್ ಪ್ರಶಸ್ತಿಗಳು ಸಂದಿವೆ.

ಮೃತರ ಅಂತ್ಯಕ್ರಿಯೆ ಮÁ. 15ರಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net