ಭೂ ಕುಸಿತ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ : ಜಿಲ್ಲಾಧಿಕಾರಿ

Dc visit Highay
Published on

ಕಾರವಾರ:  ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ 19 ಭೂ ಕುಸಿತವಾಗುವ ಸ್ಥಳಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ಜೂನ್ 12 ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ ಬಗ್ಗೆ ಅಗತ್ಯ ಗುರುತಿನ ಚಿಹ್ನೆಯುಳ್ಳ ಸೂಚನಾ ಫಲಕಗಳು ಹಾಗೂ ಇತರೇ ಸುರಕ್ಷಾ ಕ್ರಮಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಭಾರಿ ಮಳೆಯ ಕಾರಣ ಕಾರವಾರದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಮತ್ತು

ನೀರು ನಿಲುಗಡೆಯ ಸಮಸ್ಯೆಗಳ ಕುರಿತಂತೆ ಬಿಣಗಾ ಟನಲ್, ಕೆಇಬಿ ಸಬ್ ಸ್ಟೇಶನ್ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ

ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ತಹಸೀಲ್ದಾರ್ ನಿಶ್ಚಲ್ ನರೋನ್ಹ, ನಗರಸಭೆ ಪೌರಾಯುಕ್ತ ಜಗದೀಶ್ ಹುಹುಲಗೆಜ್ಜಿ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net