ಪತ್ನಿಸಮೇತರಾಗಿ ಹಂಪೆ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

Untitled-1
Published on

ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪೆ ಪ್ರವಾಸಕ್ಕಾಗಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಪತ್ನಿ ಎಂ.‌ ಉಷಾ ಅವರೊಂದಿಗೆ ಆಗಮಿಸಿದ್ದಾರೆ. ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಅವರು ಬಂದಿಳಿದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಅವರನ್ನು ಸ್ವಾಗತಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರು ಪುಸ್ತಕಗಳನ್ನು ನೀಡಿ ಬರಮಾಡಿಕೊಂಡರು. ಬಳಿಕ ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಅವರು ಹೊಸಪೇಟೆಗೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net