ಜು.2ರಂದು ನಗರದಲ್ಲಿ ವಿಚಾರ ಸಂಕಿರಣ: ಸೇನೆಯ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಮಾಹಿತಿ

1 (1)
Published on

ಮಂಡ್ಯ: ಕನ್ನಡಸೇನೆ ಕರ್ನಾಟಕ ವತಿಯಿಂದ ಜು.2ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿಭವನದಲ್ಲಿ ‘ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ’ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ತಿಳಿಸಿದರು.

ವಿಶ್ರಾಂತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಸಮಾರಂಭ ಉದ್ಘಾಟಿಸುವರು. ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ವಿಚಾರ ಮಂಡನೆ ಮಾಡುವರು. ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಸಮಾರಂಭದಲ್ಲಿ ಭಾಗವಹಿಸಲಿದ್ದು, ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡುವರು. ರಾಜ್ಯ ಉಪಾಧ್ಯಕ್ಷ ಮುನಿರಾಜೇಗೌಡ, ರಾಜ್ಯ ಕಾರ್ಯಾಧ್ಯಕ್ಷ ಮುನಿಕೃಷ್ಣ, ನಗರಸಭಾ ಸದಸ್ಯೆ ಸೌಭಾಗ್ಯ ಶಿವಲಿಂಗು ಭಾಗವಹಿಸುವರು ಎಂದು ಹೇಳಿದರು.

ಸೇನೆಯ ಮಹಂತಪ್ಪ, ಸೌಭಾಗ್ಯ, ಮಂಜುನಾಥ್ ಕಮ್ಮನಾಯಕನಹಳ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net