ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಜಯೋತ್ಸವ

h3-BJP Vijayotsava
Published on

ಹುಬ್ಬಳ್ಳಿ: ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಸಮಾವೇಶಗೊಂಡ ನೂರಾರು ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಪರ ಘೋಷಣೆ ಕೂಗಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸೆಮಿಫೈನಲ್ ಎಂದು ಕರೆಸಿಕೊಳ್ಳುವ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ. ಕರ್ನಾಟಕದಲ್ಲಿ ಜನರಿಗೆ ಗ್ಯಾರಂಟಿ ಆಮಿಷವೊಡ್ಡಿರುವ ಕಾಂಗ್ರೆಸ್ ಮೂರು ರಾಜ್ಯದಲ್ಲಿ ಮಣ್ಣು ಮುಕ್ಕುವ ಸ್ಥಿತಿಗೆ ಬಂದಿದೆ ಎಂದು ಟೀಕಿಸಿದರು.
ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ಮುಖಂಡರಾದ ಗೋವಿಂದ ಜೋಶಿ, ಪ್ರಭು ನವಲಗುಂದಮಠ, ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ, ಮಂಜುನಾಥ ವರ್ಣೇಕರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net