

ಹುಬ್ಬಳ್ಳಿ: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ವಿಧಾನಸಭಾಧ್ಯಕ್ಷರು ವಾಪಸ್ ಪಡೆದಿರುವುದು ವಿರೋಧ ಪಕ್ಷವಾದ ಬಿಜೆಪಿಯ ಹೋರಾಟಕ್ಕೆ ಸಂದ ಜಯ ಎಂದು ಶಾಸಕ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ವಿಧಾನಸಭೆ ಅಧಿವೇಶನದಲ್ಲಿ ಕೆಲವು ಮಹತ್ವದ ವಿಷಯಗಳ ಕುರಿತು ಚರ್ಚೆಗೆ ಪಟ್ಟು ಹಿಡಿದು ಸದನದ ಬಾವಿಗೆ ಇಳಿದಾಗ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿದ್ದರು. ಅಮಾನತು ಆದೇಶವನ್ನು ಪರಿಶೀಲಿಸುವಂತೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೂ ನಾವು ಮನವಿ ಮಾಡಿದ್ದೇವು. ಇದೀಗ ಅಮಾನತು ಆದೇಶ ಹಿಂಪಡೆಯುವ ಮೂಲಕ ಸ್ಪೀಕರ್ ಅವರು ಒಳ್ಳೆಯ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.