ಯದುವೀರ್‌ಗೆ ಗೆಲುವು ನಿಶ್ಚತ: ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ವಿಶ್ವಾಸ

Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎರಡೂ ಜಿಲ್ಲೆಗಳ ಜನರು ಸ್ವಯಂಪ್ರೇರಣೆ ಹಾಗೂ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಅಲ್ಲದೇ, ರಾಜಮನೆತನದ ಕೊಡುಗೆಯನ್ನು ಯಾರು ಮರೆತಿಲ್ಲ. ಇದನ್ನು ಗಮನಿಸಿದರೆ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮ ವಹಿಸಿದ್ದು, ಪೂರಕವಾದ ವಾತಾವರಣ ನಿರ್ಮಾಣವಾಗಲು ಸಾಧ್ಯವಾಯಿತು. ಇದರಿಂದ ದೊಡ್ಡ ಮಟ್ಟದ ಗೆಲುವಿಗೆ ಸಹಕಾರಿಯಾಯಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಭ್ಯರ್ಥಿ ಯದುವೀರ್ ಸಹ ಇಡೀ ಕ್ಷೇತ್ರವನ್ನು ಸುತ್ತಿದ್ದಾರೆ. ಪ್ರಚಾರದ ವೇಳೆ ಸಾರ್ವಜನಿಕರೊಂದಿಗೆ ಅವರು ಬೆರೆಯುತ್ತಿದ್ದ ರೀತಿ ಎಲ್ಲರನ್ನೂ ಚಕಿತರನ್ನಾಗಿಸಿದೆ. ರಾಜಮನೆತನದವರು ಕೈಗೆ ಸಿಗುವುದಿಲ್ಲ ಎಂಬ ವಿರೋಧ ಪಕ್ಷದವರ ಹೇಳಿಕೆಯನ್ನು ಯದುವೀರ್ ಸುಳ್ಳಾಗಿಸಿದ್ದು, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಮತ ಕೇಳಿರುವುದು ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net