ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

bjp vijayostava
ಗೆದ್ದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು ವಿನೋನಗರದ ನಿವಾಸದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಸಿಹಿ ತಿನ್ನಿಸಿದರು.
Published on

ಶಿವಮೊಗ್ಗ: ಶಿವಮೊಗ್ಗ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಬಿ.ವೈ.ರಾಘವೇಂದ್ರ ಅವರು ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಂಗಳವಾರ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳು ನಗರದಲ್ಲಿ ಸಂಭ್ರಮಾಚರಣೆ ಮಾಡಿದರು.

ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ಎದುರು ರಾಘವೇಂದ್ರ ಅವರ ಗೆಲುವು ನಿಶ್ಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ವಿನೋಬನಗರದ ತಮ್ಮ ನಿವಾಸದಲ್ಲಿದ್ದ ರಾಘವೇಂದ್ರ ಅವರನ್ನು ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಗಲಮೇಲೆ ಹೊತ್ತು ಸಂಭ್ರಮಿಸಿದರು. ರಾಘವೇಂದ್ರ ಅವರ ವಿನೋಬನಗರದ ನಿವಾಸ, ಬಿಜೆಪಿ ಮತ್ತು ಜೆಡಿಎಸ್ ಕಚೇರಿಗಳ ಎದುರು ಪಟಾಕಿ ಸಿಡಿಸಿ, ಕಾರ್ಯಕರ್ತರಿಗೂ ಸಹಿ ಹಂಚಲಾಯಿತು.
ಬೆಳಗ್ಗೆಯೇ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರಕ್ಕೆ ಬಂದ ರಾಘವೇಂದ್ರ ಅವರು ಮೊದಲೆರಡು ಸುತ್ತಿನಲ್ಲೇ ಮುನ್ನಡೆ ಕಾಯ್ದುಕೊಂಡು ಮಂದಹಾಸ ಮೂಲಕ ಗೆಲುವನ್ನು ನಿರೀಕ್ಷೆ ಮಾಡಿದ್ದರು. ಅದರಂತೆ ಫಲಿತಾಂಶವೂ ಹೊರಬಂದಿದ್ದು ಕಾರ್ಯಕರ್ತರಿಗೆ ಗೆಲುವನ್ನು ಅರ್ಪಿಸಿದರು.
ದೇವಾಲಯಗಳಿಗೆ ಭೇಟಿ ನೀಡಿದ ಬಿವೈಆರ್
ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಂಗಳವಾರ ಬೆಳಗ್ಗೆ ಮತ ಎಣಿಕೆ ಶುರುವಾಗುತ್ತಿದ್ದಂತೆ ಇತ್ತ ದೇವಸ್ಥಾನಗಳಿಗೆ ಮುಖಂಡರು, ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರವೀಂದ್ರನಗರ ಗಣಪತಿ ದೇವಸ್ಥಾನ, ತಿಲಕ್‌ನಗರ ರಾಘವೇಂದ್ರ ಸ್ವಾಮಿ ಮಠ ಹಾಗೂ ಕೋಟೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರಿಗೆ ಹಲವು ಕಾರ್ಯಕರ್ತರು ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net