ಎನ್​ಡಿಎ ಅಭ್ಯರ್ಥಿಗಳ ಗೆಲುವು ಖಚಿತ : ಬಿಎಸ್​ವೈ ವಿಶ್ವಾಸ

New BSY
Published on

ಹುಬ್ಬಳ್ಳಿ : ಉಪ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣ ಇರುವುದರಿಂದ ಎಲ್ಲ ಮೂರೂ ಕ್ಷೇತ್ರಗಳಲ್ಲಿ ನಮ್ಮ ಎನ್​ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಎಲ್ಲೆಡೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ವಾತಾವರಣ ಇದೆ. ಇಡೀ ಜಗತ್ತೇ ಮೋದಿ ಅವರತ್ತ ನೋಡುತ್ತಿದೆ. ಹಾಗಾಗಿ, ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನ ಬೇಡ ಎಂದರು.

ಬಿಜೆಪಿಯ ಶಾಸಕರು ಕಾಂಗ್ರೆಸ್​ಗೆ ಹೋಗುತ್ತಿರುವುದಾಗಿ ಶಾಸಕ ಎಸ್.ಟಿ. ಸೋಮಶೇಖರ ಅವರು ನೀಡಿರುವ ಹೇಳಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net