VIDEO: ಮೈಸೂರು ವಿವಿಯಲ್ಲಿ ನೂರನೇ ಘಟಿಕೋತ್ಸವದ ಸಂಭ್ರಮ

961414
Published on

ಮೈಸೂರು: ದೇಶದ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂದು 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮ ಗರಿಗೆದರಿದೆ. ಕ್ರಾಫರ್ಡ್ ಭವನದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, ಕುಲಪತಿ ಪ್ರೊ.ಹೇಮಂತ್ ಕುಮಾರ್, ಕುಲ ಸಚಿವರು ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಇನ್ಫೋಷಿಸ್ ಫೌಂಡೇಷನ್’ನ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ವಿವಿಯ ಕ್ರಾಫರ್ಡ್ ಹಾಲ್ ನಲ್ಲಿ ಸೋಮವಾರ ಆಯೋಜಿಸಿದ್ದ 100ನೇ ಘಟಿಕೋತ್ಸವದಲ್ಲಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಪ್ರದಾನ ಮಾಡುತ್ತಿರುವುದಾಗಿ ಹೇಳಿದ ಕುಲಪತಿಗಳು ಸಮಾಜ ಸೇವೆ, ಶಿಕ್ಷಣ, ಸಾಹಿತ್ಯ ಕ್ಷೇತ್ರಗಳಲ್ಲಿ ಸುಧಾಮೂರ್ತಿ ಅವರ ಸೇವೆಯನ್ನು ಸ್ಮರಿಸಿದರು.

29,018 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗುತ್ತಿದ್ದು, ಪುರುಷರದ್ದೇ ಮೇಲುಗೈ. 18,344 (ಶೇ.63.21) ವಿದ್ಯಾರ್ಥಿಗಳು, 10,674 (ಶೇ.36.78) ವಿದ್ಯಾರ್ಥಿನಿಯರಿಗೆ ಪದವಿ ಲಭಿಸುತ್ತಿದೆ. ಅಗ್ರಿ ಬಿಸನೆಸ್‌ ವಿಭಾಗದಲ್ಲಿ ಮನೋಜ್ ರಂಜನ್ ಅವರಿಗೆ ಡಿಲಿಟ್ ಗೌರವ.  654 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರದಾನ. 264 ಮಹಿಳೆ, 390 ಪುರುಷರಿಗೆ ಪಿಎಚ್‌ಡಿ.

ಒಟ್ಟು 392 ಪದಕ, 198 ಬಹುಮಾನವಿದೆ. 7,971 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 20,393 ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾ‌ನ ಮಾಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಮೇಲಿನ ವಿಡಿಯೋ ಕ್ಲಿಕ್ಕಿಸಬಹುದು.

ವಿವಿಯ ಬಗ್ಗೆ ಒಂದಿಷ್ಟು: ಮೈಸೂರು ವಿಶ್ವವಿದ್ಯಾಲಯ 1916ರ ಜುಲೈ 27ರಂದು ಸ್ಥಾಪಿಸಲ್ಪಟ್ಟಿದೆ. ದೇಶದ ಆರನೇ ಮತ್ತು ರಾಜ್ಯದ ಮೊಟ್ಟ ಮೊದಲ ವಿಶ್ವವಿದ್ಯಾಲಯವಿದು. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನ್ ಎಂ.ವಿ.ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಫಲವಿದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net