ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ: ಬಂದರು ಠಾಣೆಗೆ ಹಿಂದು ಸಂಘಟನೆ ದೂರು

crime
Published on

ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ಧ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಈ ನಡುವೆ ಮಂಗಳೂರಿನ ನಿವಾಸಿಯೋರ್ವ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ. ಆತನ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು ಎಂದು ಹಿಂದು ಸಂಘಟನೆ ಮುಖಂಡರು ಬಂದರು ಠಾಣೆಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net