ಪುತ್ತೂರು: ದಿನವಿಡೀ ಕಾಯಿಸಿ ಬಳಿಕ ಮರಣೋತ್ತರ ಪರೀಕ್ಷೆಯನ್ನು ನಡೆಸಿದ ಬಗ್ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯ ವಿಡಿಯೋ ವೈರಲ್ ಆಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ನಗರ ಠಾಣೆಗೆ ದೂರು ನೀಡಲಾಗಿದೆ.
ಡಿ.೧೦ರಂದು ಬೆಳಗ್ಗೆ ಪುಂಜಾಲಕಟ್ಟೆಯಿಂದ ಯುವಕನನ್ನು ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದು, ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಮಧ್ಯಾಹ್ನದ ಬಳಿಕ ಆಸ್ಪತ್ರೆಗೆ ಬಂದಿದ್ದು, ಸಂಜೆ ವೇಳೆ ಎಲ್ಲ ಪ್ರಕ್ರಿಯೆ ಮುಗಿದು ಕರ್ತವ್ಯದಲ್ಲಿದ್ದ ಡಾ.ಶ್ವೇತಾ ಮರಣೋತ್ತರ ಪರೀಕ್ಷೆಗೆ ಹೋಗುವ ಸಂದರ್ಭ ಮೃತರ ಕಡೆಯ ಕೆಲವು ಮಂದಿ ವೈದ್ಯರು ಮರಣೋತ್ತರ ಪರೀಕ್ಷೆಗೆ ತಡವಾಗಿ ಬಂದಿರುವುದಾಗಿ ಆರೋಪಿಸಿ ಅವರನ್ನು ತರಾಟೆಗೆತ್ತಿಕೊಂಡು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಈ ವೇಳೆ ವೈದ್ಯರು ಶಸ್ತ್ರಚಿಕಿತ್ಸೆ ಅರ್ಧಕ್ಕೆ ಬಿಟ್ಟು ಬರಲಾಗುವುದಿಲ್ಲ ಎಂದು ಹೇಳಿದರೂ ಅಲ್ಲಿ ನೆರೆದವರು ವೈದ್ಯರ ಮಾತನ್ನು ಕೇಳದೆ ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದರು.
ನೊಂದ ವೈದ್ಯೆ ಡಾ.ಶ್ವೇತಾ, ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಽಕಾರಿ ಡಾ.ಆಶಾ ಪುತ್ತೂರಾಯ, ತಾಲೂಕು ಆರೋಗ್ಯಾಽಕಾರಿ ಡಾ. ದೀಪಕ್ ರೈ ಸರ್ಕಾರಿ ಕರ್ತವ್ಯದ ವೇಳೆ ಅಡ್ಡಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆಪಾದನೆಯ ವಿಡಿಯೋ ಹಾಕಿರುವ ಕುರಿತು ದೂರು ನೀಡಿದ್ದಾರೆ.