ಸೆ.21ರಂದು ವಿಧಾನಸೌಧಕ್ಕೆ ಮುತ್ತಿಗೆ; ರೈತಸಂಘದ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಹೇಳಿಕೆ

J Karthik Farmers Union General Secratary
ರೈತಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್.
Published on

ಬಳ್ಳಾರಿ: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹಿಸಿ ಸೆ.21ರಂದು ಬೆಳಗ್ಗೆ 11ಕ್ಕೆ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್ ತಿಳಿಸಿದರು.

ಕಾಯ್ದೆಗಳ ತಿದ್ದುಪಡಿಯಿಂದ ರೈತರ ಭೂಮಿಗೆ ಹೆಚ್ಚಿನ ಬೆಲೆ ಸಿಗಲಿದೆ ಎಂದು ಬಿಂಬಿಸಲಾಗುತ್ತಿದೆ. ಆದರೆ, ರೈತರನ್ನು ಭೂಮಿಯಿಂದ ದೂರ ಮಾಡಿ ಮಹಾನಗರಗಳಿಗೆ ವಲಸೆ ಕಳಿಸುವ ಪ್ರಯತ್ನ ಇದಾಗಿದೆ. ಎಪಿಎಂಸಿಗಳನ್ನೂ ಕಾರ್ಪೋರೆಟ್ ವಲಯಗಳಿಗೆ ಮುಕ್ತ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ವಿರೋಧಿ ನೀತಿ ಖಂಡಿಸಿ ಸೆ.21ರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಅಧಿವೇಶನ ಮುಗಿಯುವವರೆಗೆ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ಪಿ.ನಾರಾಯಣರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net